ಉಧಂಪುರ ಎನ್‌ಕೌಂಟರ್ : ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಸೇನಾ ಯೋಧ ಹುತಾತ್ಮ
ಜಮ್ಮು, 20 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಸಿಯೋಜ್ ಧಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ವೇಳೆ ಒಬ್ಬ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಶುಕ್ರವಾರ ಸಂಜೆ ಉಧಂಪುರದ ದುಡು-ಬಸಂತ್‌ಗಢದ ಸಿಯೋಜ್ ಧಾರ್ ಅರಣ್ಯ ಪ್ರದ
Encounter


ಜಮ್ಮು, 20 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಸಿಯೋಜ್ ಧಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ವೇಳೆ ಒಬ್ಬ ಸೇನಾ ಯೋಧ ಹುತಾತ್ಮರಾಗಿದ್ದಾರೆ.

ಶುಕ್ರವಾರ ಸಂಜೆ ಉಧಂಪುರದ ದುಡು-ಬಸಂತ್‌ಗಢದ ಸಿಯೋಜ್ ಧಾರ್ ಅರಣ್ಯ ಪ್ರದೇಶ ಮತ್ತು ದೋಡಾದ ಭದೇರ್ವಾ ಪ್ರದೇಶದಲ್ಲಿ ಭಯೋತ್ಪಾದಕರು, ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆಯ ಜಂಟಿ ಶೋಧ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೈನಿಕ ಆಸ್ಪತ್ರೆಗೆ ಸಾಗಿಸಲ್ಪಟ್ಟರೂ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರು ಕಾಡಿನೊಳಗೆ ಅಡಗಿಕೊಂಡಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಸಂಪೂರ್ಣ ಪ್ರದೇಶವನ್ನು ರಾತ್ರಿಯಿಡೀ ಸುತ್ತುವರಿಯಲಾಗಿದೆ. ಶನಿವಾರ ಬೆಳಿಗ್ಗೆಯಿಂದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ಡ್ರೋನ್‌ಗಳು ಹಾಗೂ ಸ್ನಿಫರ್ ಶ್ವಾನಗಳ ಸಹಾಯದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಹಿರಿಯ ಅಧಿಕಾರಿಗಳ ಮಾಹಿತಿ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಎರಡು–ಮೂರು ಉಗ್ರರು ಅಡಗಿರುವ ಸಾಧ್ಯತೆ ಇದೆ. ಉಧಂಪುರ ಹಾಗೂ ದೋಡಾದಿಂದ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದ್ದು, ಬೃಹತ್ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande