ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಾತಿ ಗಣತಿ ವೇಳೆ ಒಕ್ಕಲಿಗ ಸಮುದಾಯದ ಸದಸ್ಯರು ತಮ್ಮ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕೆಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಒಕ್ಕಲಿಗ ಸಮುದಾಯದ ಜಾಗೃತಿ ಸಭೆ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದಸ್ವಾಮಿಯ ನೇತೃತ್ವದಲ್ಲಿ ನಡೆಯುತ್ತಿದೆ.
ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಡಿ.ವಿ. ಸದಾನಂದಗೌಡ, ಆರ್ ಅಶೋಕ್, ಚಲುವರಾಯಸ್ವಾಮಿ, ಅಶ್ವಥ್ ನಾರಾಯಣ್, ನಿಖಿಲ್ ಕುಮಾರಸ್ವಾಮಿ, ಎಂ.ಸಿ. ಸುಧಾಕರ್ ಮತ್ತು ಒಕ್ಕಲಿಗರ ಸಂಘದ ಅಧ್ಯಕ್ಷರು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಸಭೆಯಲ್ಲಿ ಒಕ್ಕಲಿಗರ ಉಪಜಾತಿಗಳನ್ನು ಹೇಗೆ ನಮೂದಿಸಬೇಕು ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಜಾತಿ ಸಮೀಕ್ಷೆಯಲ್ಲಿ “ಒಕ್ಕಲಿಗ” ಮೊದಲು ಬರೆಸುವುದು ಸಮುದಾಯದ ಮುಖ್ಯ ಮನವಿ ಆಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa