ಹಾಸನ, 21 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಹಾಸನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ವ್ಯಾಪ್ತಿಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಪಂಚಾಯತ್ ಸದಸ್ಯರುಗಳು, ನಿವೃತ್ತ ಸರ್ಕಾರಿ ನೌಕರರು ಮತ್ತು ಹಿರಿಯ ನಾಗರೀಕರು, ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa