ಅಂಜನಾದ್ರಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಗಂಗಾವತಿ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಅಂಜನಾದ್ರಿಯ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅವರು ಸೂಚಿಸಿದ್ದಾರೆ. ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಗಂಗಾವತಿ ಶಾಸಕರೊಂದಿಗೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಿವ
ಅಂಜನಾದ್ರಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಅಂಜನಾದ್ರಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಅಂಜನಾದ್ರಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಗಂಗಾವತಿ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಅಂಜನಾದ್ರಿಯ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಅವರು ಸೂಚಿಸಿದ್ದಾರೆ.

ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಗಂಗಾವತಿ ಶಾಸಕರೊಂದಿಗೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿ, ನಂತರ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಅಂಜನಾದ್ರಿಗೆ ಸಂಬಂಧಿಸಿದ ಕಾಮಗಾರಿಗಳ ಬಾರ್ ಚಾಟ್ ತಕ್ಷಣ ಒದಗಿಸಿ, ಈಗಾಗಲೇ ಕೈಗೊಂಡ ಎಲ್ಲಾ ಕೆಲಸಗಳನ್ನು ನವೆಂಬರ್ ಅಂತ್ಯದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮೊದಲು ಅಂಜನಾದ್ರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವಂತಹ ಹಿಂಬದಿಯ ರಸ್ತೆಗಳಿಗೆ ಒತ್ತು ನೀಡಿ. ಅಂಜನಾದ್ರಿ ಬೆಟ್ಟದ ಹತ್ತಿರ ಪ್ರಗತಿಯಲ್ಲಿರುವ ಪ್ರವಾಸಿ ಮಂದಿರ ಕಾಮಗಾರಿಗಳನ್ನು ವೀಕ್ಷಿಸಿ ಡಿಸೆಂಬರ ತಿಂಗಳಲ್ಲಿ ಹನುಮಮಾಲಾ ಕಾರ್ಯಕ್ರಮ ಇರುವುದರಿಂದ ಪ್ರವಾಸಿಗರು ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಾಗೂ ಡಾರ್ಮಿಟರಿ ಬ್ಲಾಕ್ ಗಳಿಗೆ ಅಗತ್ಯವಿರುವ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಸೆಪ್ಟಿಕ್ ಟ್ಯಾಂಕ್, ಬೋರ್ವೆಲ್, ಪಾತ್ ವೇ ಕಾಮಗಾರಿಗಳನ್ನು ಶೀಘ್ರವಾಗಿ ಟೆಂಡರ್ ಕರೆದು ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಪ್ರದಕ್ಷಿಣ ಪಥ ಹಾಗೂ ಥೀಮ್ ಆಧಾರಿತ ಮೆಟ್ಟಿಲುಗಳ ಕಾಮಗಾರಿಗಳಿಗೆ ಅಗತ್ಯವಿರುವ ಭೂಮಿಗೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆಯಲು ಎಲ್ಲಾ ದಾಖಲೆಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಲ್ಲಿ ಪರಿಶೀಲಿಸಿದ ನಂತರ ಪರಿವೇಶ್ 2.0 ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ ಅಂಜನಾದ್ರಿ ಬೆಟ್ಟದ ಮುಖ್ಯರಸ್ತೆಯನ್ನು ಅಗಲೀಕರಣ ಮತ್ತು ವಿದ್ಯುತ್ ಕಂಬಗಳನ್ನು ಅಳವಡಿಸಲು ಗಂಗಾವತಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಮಾತನಾಡಿ, ಅಂಜನಾದ್ರಿ ಅಭಿವೃದ್ಧಿಯ ವಿವಿಧ ಕಾಮಗಾರಿಗಳಾದ ಪ್ರದಕ್ಷಿಣೆ ಪಥ, ಮೆಟ್ಟಿಲುಗಳ ವಿನ್ಯಾಸ, ನಿರ್ಮಾಣದ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ನಂತರದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರಿಗೆ ಶಾಶ್ವತ ಪ್ರಸಾದ ನಿಲಯ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಒದಗಿಸಬೇಕು. ಅಂಜನಾದ್ರಿಯ ಬೆಟ್ಟ, ಪಂಪಾ ಸರೋವರ, ಆನೆಗುಂದಿಗೆ ಉತ್ತರ ಭಾರತದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಹಾಗಾಗಿ ಅವರು ರಸ್ತೆಯ ಪಕ್ಕದಲ್ಲಿ ಅಡುಗೆ ಮಾಡಲು ಅಂಜನಾದ್ರಿಯ ಸುತ್ತ ಮುತ್ತ ಉಳಿದು ಕೊಳ್ಳುತ್ತಾರೆ. ಅವರ ಸುರಕ್ಷತೆ ದೃಷ್ಟಿಯಿಂದ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗಳ ಅಗಲೀಕರಣ ಮತ್ತು ರಸ್ತೆಯ ಪಕ್ಕದಲ್ಲಿ ವಿದ್ಯುತ್ ದೀಪಗಳನ್ನು ‌ಅಳವಡಿಸುವುದರಿಂದ ಎಲ್ಲರಿಗೂ ಅನುಕೂಲವಾಗತ್ತದೆ. ಅದ್ದರಿಂದ ಆದಷ್ಟು ಬೇಗ ಈ ವ್ಯವಸ್ಥೆ ಮಾಡಬೇಕು. ಈಗಾಗಲೇ ಅಂಜನಾದ್ರಿ ಬೆಟ್ಟಕ್ಕೆ ರೋಪ ವೇ ಕಾಮಗಾರಿಯ ಡಿ.ಪಿ.ಆರ್. ರೆಡಿಯಾಗಿದ್ದು ಟೆಂಡರ್ ಹಂತದಲ್ಲಿದೆ. ಅದನ್ನು ಕಾರ್ಯರೂಪಕ್ಕೆ ತರಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಅಂಜನಾದ್ರಿ ಶ್ರೀ ಹನುಮಾನ ಕ್ಷೇತ್ರಕ್ಕೆ ಆಗಮಿಸುವಂತಹ ಭಕ್ತಾದಿಗಳಿಗೆ ಉಳಿದುಕೊಳ್ಳಲು ತಂಗುದಾಣಗಳನ್ನು ನಿರ್ಮಾಣ ಮಾಡುತ್ತಿದ್ದು, ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಈಗಾಗಲೇ ಕಾಮಗಾರಿಯು ಕೊನೆಯ ಹಂತದಲ್ಲಿದ್ದು, ಇನ್ನೂ ಬಾಕಿ‌ ಉಳಿದ ಕೆಲಸಗಳಾದ ಶೌಚಾಲಯ, ಟೈಲ್ಸ್ ವರ್ಕ್, ಲ್ಯಾಂಡ್‌ ಸ್ಕೇಪ್, ಗಾರ್ಡನ್ ನಿರ್ಮಾಣ, ಕಂಪೌಂಡ್‌, ಪೇಟಿಂಗ್ ಹಾಗೂ ಇತರೆ ಕೆಲಸಗಳಿಗೆ ಸಂಬಂಧಿಸಿದಂತೆ ಹಂತ ಹಂತವಾಗಿ ಬಾರ್ ಚಾರ್ಟ್ ಗಳನ್ನು ಸಿದ್ದಪಡಿಸಿ, ಎಲ್ಲಾ ಕೆಲಸಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ರಮೇಶ, ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ, ಪುರಾತತ್ವ ಮತ್ತು ವಸ್ತು ಪರಂಪರೆ ಸಂಗ್ರಹಾಲಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ನಾಯ್ಕ್, ಗಂಗಾವತಿ ತಹಶಿಲ್ದಾರ ಯು.ನಾಗರಾಜ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯಂ.ಹೆಚ್. ಪ್ರಕಾಶ್ ರಾವ್ ಹಾಗೂ ಸೃಷ್ಟಿ ಆರ್ಕಿಟೆಕ್ಟ್ ಮುಖ್ಯಸ್ಥ ಶ್ರೀಪಾದ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande