ಹಾಸನ, 21 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕಾರ್ಮಿಕ ಸಚಿವರ ನೇತೃತ್ವದಲ್ಲಿ ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ, ಕಾರ್ಮಿಕ ಆಯುಕ್ತಾಲಯ ಹಾಗೂ ಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ, ಪತ್ರಿಕಾ ವಿತರಕರ ವಿಮಾ ಯೋಜನೆ, ಮೋಟಾರು ಸಾರಿಗೆ ಹಾಗೂ ಸಂಬಂಧಿಸಿದ ನೌಕರರ ಅಪಘಾತ ಪರಿಹಾರ ಯೋಜನೆಯಲ್ಲಿ ನೊಂದಾಯಿತರಾದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಮತ್ತು ಅರಿವು ಕಾರ್ಯಕ್ರಮವನ್ನು ಸೆ.೨೩ ರಂದು ಆಯೋಜಿಸಲಾಗಿದ್ದು, ಅಪರಾಹ್ನ ೦೩ ಗಂಟೆಗೆ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆಡಿಟೋರಿಯಂ, ಸಾಲಗಾಮೆ ರಸ್ತೆ, ಹಾಸನ ಇಲ್ಲಿ ಆಯೋಜಿಸಲಾಗಿದೆ ಎಂದು ಹಾಸನ ಉಪ ವಿಭಾಗದ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa