ಜಾತಿ ಜನಗಣತಿ ಕುರಿತು ಮಾಜಿ ಸಚಿವ ಸಿ.ಸಿ.ಪಾಟೀಲ್ ಗಂಭೀರ ಆರೋಪ
ಗದಗ, 21 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಾಳೆಯಿಂದ ರಾಜ್ಯದಲ್ಲಿ ಜಾತಿ ಜನಗಣತಿ ಪ್ರಕ್ರಿಯೆ ಆರಂಭವಾಗುತ್ತಿರುವ ಸಂದರ್ಭದಲ್ಲಿ, ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. “ಈ ಸರ್ಕಾರ ಜಾತಿ ಗಣತಿಯಲ್ಲಿ ಏನು ಬೇಕಾದರೂ ಮಾಡಬಹುದು, ಆದ್ದರಿಂದ ಎಚ್ಚರಿಕೆ ಅಗತ
ಪೋಟೋ


ಗದಗ, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಾಳೆಯಿಂದ ರಾಜ್ಯದಲ್ಲಿ ಜಾತಿ ಜನಗಣತಿ ಪ್ರಕ್ರಿಯೆ ಆರಂಭವಾಗುತ್ತಿರುವ ಸಂದರ್ಭದಲ್ಲಿ, ಮಾಜಿ ಸಚಿವ ಸಿ.ಸಿ. ಪಾಟೀಲ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. “ಈ ಸರ್ಕಾರ ಜಾತಿ ಗಣತಿಯಲ್ಲಿ ಏನು ಬೇಕಾದರೂ ಮಾಡಬಹುದು, ಆದ್ದರಿಂದ ಎಚ್ಚರಿಕೆ ಅಗತ್ಯ” ಎಂದು ಎಚ್ಚರಿಸಿದ್ದಾರೆ.

ಅಧಿಕಾರಿಗಳು ಗಣತಿ ವೇಳೆ ಪೆನ್ಸಿಲ್ ಬಳಸದೇ, ಪೆನ್ನಿನಿಂದ ಮಾತ್ರ ವಿವರಗಳನ್ನು ದಾಖಲಿಸಬೇಕು ಎಂದು ಪಾಟೀಲ್ ಜನತೆಗೆ ಮನವಿ ಮಾಡಿದರು. “ಪೆನ್ಸಿಲ್ ಬಳಸಿದರೆ ನಂತರ ಅಳಿಸಿ, ಸರ್ಕಾರ ಬಯಸಿದಂತೆ ತಿದ್ದುಪಡಿ ಮಾಡುವ ಸಾಧ್ಯತೆ ಇದೆ” ಎಂದು ಶಂಕೆ ವ್ಯಕ್ತಪಡಿಸಿದರು.

ಇದಲ್ಲದೆ, “ಗಣತಿಗೆ ಬರುವ ಸಿಬ್ಬಂದಿ ಸರ್ಕಾರದ ಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಾರೆ. ಮನೆಗೆ ಪುರುಷರು ಇಲ್ಲದಾಗ ಪ್ರಶ್ನೆಗಳನ್ನು ಟ್ವಿಸ್ಟ್ ಮಾಡಿ, ವೀರಶೈವ, ಲಿಂಗಾಯತ, ಪಂಚಮಸಾಲಿ ಎಂಬಂತೆ ಉಪವರ್ಗಗಳನ್ನು ಬದಲಾಯಿಸುವ ಸಾಧ್ಯತೆ ಇದೆ” ಎಂದು ಹೇಳಿದರು.

ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಟೀಲ್, “ಈ ಸರ್ಕಾರದ ಒಂದೇ ಉದ್ದೇಶ ಹಿಂದೂ ಸಂಸ್ಕೃತಿ ಮತ್ತು ವೀರಶೈವ ಸಮಾಜವನ್ನು ಒಡೆಯುವುದು” ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande