ಜೈನ್-ಸಿಖ್ ಅರ್ಚಕರು ಹಾಗೂ ಗ್ರಂಥಿಗಳಿಗೆ ಮಾಸಿಕ ಗೌರವಧನ : ಅರ್ಜಿ ಆಹ್ವಾನ
ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಸಕ್ತ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಜೈನ್ ಬಸದಿ-ಸಿಖ್ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೈನ್ ಮುಖ್ಯ ಅರ್ಚಕರಿಗೆ ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಅರ್ಚಕರು-ಗ್ರಂಥಿಗಳಿಗೆ ಮಾಸಿಕ ಗೌರವಧನವನ್ನು ನೀಡಲ
ಜೈನ್-ಸಿಖ್ ಅರ್ಚಕರು ಹಾಗೂ ಗ್ರಂಥಿಗಳಿಗೆ ಮಾಸಿಕ ಗೌರವಧನ : ಅರ್ಜಿ ಆಹ್ವಾನ


ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಜೈನ್ ಬಸದಿ-ಸಿಖ್ ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಜೈನ್ ಮುಖ್ಯ ಅರ್ಚಕರಿಗೆ ಮತ್ತು ಸಿಖ್ ಮುಖ್ಯ ಗ್ರಂಥಿಗಳು ಹಾಗೂ ಸಹಾಯಕ ಅರ್ಚಕರು-ಗ್ರಂಥಿಗಳಿಗೆ ಮಾಸಿಕ ಗೌರವಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ಕಚೇರಿ ಪಡೆದು, ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 30-09-2025ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ, ಅಥವಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ಇಂಡಿಗೆ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande