ಶಿವಮೊಗ್ಗ, 21 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಅಭಿಯಾನದಡಿ ಶಿವಮೊಗ್ಗದಲ್ಲಿ ಯುವ ಮೋರ್ಚಾ ವತಿಯಿಂದ ನಶಾಮುಕ್ತ ಭಾರತಕ್ಕಾಗಿ ನಮೋ ಯುವ ರನ್ ಬೃಹತ್ ಮ್ಯಾರಥಾನ್ ಆಯೋಜಿಸಲಾಗಿತ್ತು.
ಈ ಮ್ಯಾರಥಾನ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಬಿ. ವೈ. ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಆರ್.ಕೆ. ಸಿದ್ದರಾಮಣ್ಣ, ಕುಮಾರ ಸ್ವಾಮಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಉಪಸ್ಥಿತರಿದ್ದರು.
ಇದೇ ವೇಳೆ ಚಲನಚಿತ್ರ ಕಲಾವಿದರಾದ ಕಾರುಣ್ಯ ರಾಮ್, ಗೌರಿಶಂಕರ್, ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಸೇರಿದಂತೆ ಹಲವು ಪ್ರಮುಖರು, ಪಕ್ಷದ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa