ರಾಯಚೂರು, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ನಿಮಿತ್ತ ಹಿರಿಯ ನಾಗರೀಕರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದವು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಮತ್ತು ಇನ್ನೀತರರು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್