ಶಿವಮೊಗ್ಗ, 21 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸೆ.23 ಬೆಳಿಗ್ಗೆ 10.30ಕ್ಕೆ ಇರುವಕ್ಕಿಯ ಮುಖ್ಯ ಆವಣರದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ ಅಧ್ಯಕ್ಷತೆ ವಹಿಸಲಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾಧನೆಗೈದ ಸಂಶೋಧಕರಿಗೆ ಹಾಗೂ ನೌಕರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುವರು.
ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ, ವಿಶ್ವವಿದ್ಯಾಲಯ ವ್ಯವಸ್ಥಾಪನ ಮಂಡಳಿಯ ಸದಸ್ಯರುಗಳು, ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಅಧಿಕಾರಿ ವರ್ಗದವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa