ಹುಬ್ಬಳ್ಳಿಯಲ್ಲಿ ನಮೋ ಯುವ ಓಟ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ
ಹುಬ್ಬಳ್ಳಿ, 21 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ‘ನಮೋ ಯುವ ಓಟ’ ಕಾರ್ಯಕ್ರಮವನ್ನು ಹುಬ್ಬಳ್ಳಿಯ ತೋಳನಕೆರೆ ಆವರಣದಲ್ಲಿ ಆಯೋಜಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ
Run


Run


ಹುಬ್ಬಳ್ಳಿ, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ‘ನಮೋ ಯುವ ಓಟ’ ಕಾರ್ಯಕ್ರಮವನ್ನು ಹುಬ್ಬಳ್ಳಿಯ ತೋಳನಕೆರೆ ಆವರಣದಲ್ಲಿ ಆಯೋಜಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಅಭಿಯಾನಕ್ಕೆ ಚಾಲನೆ ನೀಡಿ ಯುವಕರೊಂದಿಗೆ ಓಟದಲ್ಲಿ ಪಾಲ್ಗೊಂಡರು.

ಈ ಮ್ಯಾರಥಾನ್‌ನ ಉದ್ದೇಶ ಯುವಕರಲ್ಲಿ ದೈಹಿಕ ಸಾಮರ್ಥ್ಯ, ಆರೋಗ್ಯ ಜಾಗೃತಿ ಮತ್ತು “ನಶೆಮುಕ್ತ ಭಾರತ” ಸಂದೇಶವನ್ನು ಬಿತ್ತರಿಸುವುದಾಗಿದೆ. ಪ್ರಧಾನಿ ಮೋದಿ ನೀಡಿರುವ #FitIndia ಕರೆಗೆ ತಕ್ಕಂತೆ, ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಯತ್ತ ಯುವಕರನ್ನು ಪ್ರೇರೇಪಿಸಲು ಈ ಕಾರ್ಯಕ್ರಮ ಆಯೋಜಿಸಲಾಯಿತು.

ದೇಶದ 75 ನಗರಗಳಲ್ಲಿ ಇಂದು ಏಕಕಾಲದಲ್ಲಿ ನಡೆದ ಈ “ನಮೋ ಯುವ ರನ್” ಮ್ಯಾರಥಾನ್ ಅಭಿಯಾನದಲ್ಲಿ ಸಾವಿರಾರು ಯುವಕರು ಪಾಲ್ಗೊಂಡಿದ್ದು, ಇದನ್ನು ದಾಖಲೆಯ ಅಭಿಯಾನವೆಂದು ಆಯೋಜಕರು ಹೇಳಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ಮಾಜಿ ರಾಜ್ಯಸಭಾ ಸಂಸದ ಡಾ. ಪ್ರಭಾಕರ ಕೋರೆ ಹಾಜರಿದ್ದರು.

ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಹರೀಶ ಪೂಂಜ, ಹುಬ್ಬಳ್ಳಿ-ಧಾರವಾಡ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೀತಂ ಅರಕೇರಿ ಸೇರಿದಂತೆ ಪಕ್ಷದ ಅನೇಕ ನಾಯಕರು ಭಾಗವಹಿಸಿದರು. ಸಾವಿರಾರು ಯುವಕರು ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande