ರಾಯಚೂರು : ಸೆ.22ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ
ರಾಯಚೂರು, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸೆ.22ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ವೇಳೆ ಮೂರು ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
ರಾಯಚೂರು : ಸೆ.22ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ


ರಾಯಚೂರು, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸೆ.22ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ವೇಳೆ ಮೂರು ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.

ಅರ್ಹತೆಗಳು: ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಆಸಕ್ತ 18 ರಿಂದ 30 ವರ್ಷಗಳ ವರೆಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡೆಟಾ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರಗಳನ್ನು ಸಲ್ಲಿಸಬೇಕು.

ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲ ಮಹಡಿ, ಗೂಡ್ ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಹಾಗೂ ದೂರವಾಣಿ ಸಂಖ್ಯೆ 08532-231684, 9901028565, ಇಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande