ಹೆಚ್‍ಎಎಲ್‍ನಲ್ಲಿ ವೃತ್ತಿಗಳ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್)ನಲ್ಲಿ ವಿವಿಧ ವೃತ್ತಿಗಳಲ್ಲಿ ಶಿಶುಕ್ಷು ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫಿಟ್ಟರ್, ಫೌಡ್ರೀಮ್ಯಾನ್, ರ್ನರ್, ಶೀಟ್ ಮೆಟಲ್ ವರ್ಕರ್, ಮಶಿ
ಹೆಚ್‍ಎಎಲ್‍ನಲ್ಲಿ ವೃತ್ತಿಗಳ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ


ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್)ನಲ್ಲಿ ವಿವಿಧ ವೃತ್ತಿಗಳಲ್ಲಿ ಶಿಶುಕ್ಷು ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಫಿಟ್ಟರ್, ಫೌಡ್ರೀಮ್ಯಾನ್, ರ್ನರ್, ಶೀಟ್ ಮೆಟಲ್ ವರ್ಕರ್, ಮಶಿನಿμï್ಟ, ಟೂಲ್ ಮತ್ತು ಡೈ ಮೇಕರ್, ಎಲೆಕ್ಟ್ರಿಶೀಯನ್, ಸಿ.ಎನ್.ಸಿ ಪೆÇ್ರೀಗಾಮರ್ ಕಮ್ ಆಪರೇಟರ್, ವೆಲ್ಡರ್, ಮೆಕ್ಯಾನಿಕ್ ರೆಪ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್, ಕೋಪಾ, ಕಾಪೆರ್ಂಟರ್ ವೃತ್ತಿಗಳಲ್ಲಿ ಐ.ಟಿ.ಐ ಪರೀಕ್ಷೆಯಲ್ಲಿ ಉತ್ತೀರ್ಣವಾಗಿರಬೇಕು.

ಅಭ್ಯರ್ಥಿಗಳು www.apprenticeship.org/candidate-registration ನಲ್ಲಿ ನೋಂದಣಿ ಮಾಡಿಕೊಂಡ ನಂತರ ನೋಂದಣಿ ಸಂಖ್ಯೆಯ ಪ್ರತಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಾಯಚೂರು ಇವರಿಗೆ ಸಲ್ಲಿಸಿ, ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೆರಾಕ್ಸ್ ಪ್ರತಿ, ಅಂಗವಿಕಲ ಅಭ್ಯರ್ಥಿಗಳು ಅಂಗವಿಕಲ ಪ್ರಮಾಣ ಪತ್ರ ಪಾಸಪೆÇೀರ್ಟ ಅಳತೆಯ ಭಾವಚಿತ್ರಗಳೊಂದಿಗೆ ಅಕ್ಬೋಬರ್ 12ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಾಯಚೂರು ಕಚೇರಿಯ ದೂರವಾಣಿ ಸಂಖ್ಯೆ: 08532-231684 ಅಥವಾ 9901028565ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande