ಬಳ್ಳಾರಿ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ. ಟಿ. ದುರುಗಪ್ಪ ಅವರು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಂಘದ ಬಳ್ಳಾರಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಹೈಕೋರ್ಟ್ ಪೀಠದಲ್ಲಿ ಯುಜಿಸಿ / ನಾನ್ ಯುಜಿಸಿ ಎಂಬ ದೂರು ವಿಚಾರಣೆ ನಡೆದಿದೆ. ಕಾರಣ ವಿದ್ಯಾರ್ಥಿಗಳಿಗೆ ಬೋಧನೆ ಇಲ್ಲದಂತಾಗಿದೆ. ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳತ್ತ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಕತ್ತಲಕೂಪವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉನ್ನತ ಶಿಕ್ಷಣ ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ಅಥವಾ ಯಾವೊಬ್ಬ ಶಾಸಕರು ಅತಿಥಿ ಶಿಕ್ಷಕರು ಮತ್ತು ಬೋಧಕರಿಲ್ಲದೇ ಕೊರಗುತ್ತಿರುವ ವಿದ್ಯಾರ್ಥಿಗಳ ಪರವಾಗಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ. ತಮ್ಮ ನೋವಿಗೆ ಧ್ವನಿಯಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಡಾ. ಹನುಮೇಶ ಜೋಳದರಾಶಿ. ಡಾ. ಕೆ.ಬಸಪ್ಪ, ರುದ್ರಮುನಿ, ಗೋವಿಂದ, ಮಾರಪ್ಪ ಎ.ಕೆ. ಎಂ. ರಫೀ, ಎಸ್.ಎಂ. ರಮೇಶ್, ಗುರುರಾಜ್, ಡಾ. ಗಂಗಾಧರ, ಶಂಕರ್, ಡಾ. ನಾಗಪ್ಪ ಬಿ.ಈ. ಶರಣಪ್ಪ, ವೀರೇಶ್, ಡಾ. ದಸ್ತಗಿರಿ ಸಾಹೇಬು, ತೌಸಿಫ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್