ಜಿಎಸ್‌ಟಿ : ಬೆನ್ನು ತಟ್ಟಿಕೊಳ್ಳುತ್ತಿರುವ ಮೋದಿ-ಸಿದ್ದರಾಮಯ್ಯ ವ್ಯಂಗ್ಯ
ಮೈಸೂರು, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಸಿದ್ದರಾಮಯ್ಯ ವ್ಯಂಗ
Cm


ಮೈಸೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜಿಎಸ್‌ಟಿ ಜಾರಿ ಮಾಡಿದ್ದೂ ಮೋದಿ. ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿರುವುದನ್ನು ಪ್ರಧಾನಿ ಮೋದಿಯವರೇ. ಅದೆಲ್ಲವನ್ನೂ ಭಾರತೀಯರಿಗೆ ವಾಪಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

ಜಿಎಸ್‌ಟಿ 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕುತ್ತಿದ್ದಾರೆ ಜನತೆ ಇದಕ್ಕೆಲ್ಲಾ ಮರಳಾಗಬಾರದು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande