ನವದೆಹಲಿ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಇಂದು ಮಧ್ಯಾಹ್ನ 3:30ಕ್ಕೆ ದಕ್ಷಿಣ ದೆಹಲಿಯ ಅಮರ್ ಕಾಲೋನಿ ಮಾರುಕಟ್ಟೆಗೆ ಭೇಟಿ ನೀಡಿ, ವ್ಯಾಪಾರಿಗಳು ಮತ್ತು ಸ್ಥಳೀಯರೊಂದಿಗೆ ಜಿಎಸ್‌ಟಿ ಉಳಿತಾಯ ಉತ್ಸವದ ಕುರಿತು ಚರ್ಚಿಸಲಿದ್ದಾರೆ ಎಂದು ಪಕ್ಷದ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ತಿಳಿಸಲಾಗಿದೆ.
ಹೊಸ ಜಿಎಸ್ಟಿ ದರಗಳು ಇಂದು ದೇಶವ್ಯಾಪಿ ಜಾರಿಯಾಗಿದ್ದು, ಮುಖ್ಯವಾಗಿ 5% ಮತ್ತು 18% ಎಂಬ ಎರಡು ಸ್ಲ್ಯಾಬ್‌ಗಳಲ್ಲಿ ಸರಕು-ಸೇವೆಗಳು ಲಭ್ಯವಾಗುತ್ತಿವೆ. ಐಷಾರಾಮಿ ವಸ್ತುಗಳಿಗೆ 40% ತೆರಿಗೆ ವಿಧಿಸಲಾಗಿದ್ದು, ಸುಮಾರು 400ಕ್ಕೂ ಹೆಚ್ಚು ವಸ್ತುಗಳು ಅಗ್ಗವಾಗಿವೆ. ಪ್ರಧಾನಿ ನರೇಂದ್ರ ಮೋದಿ ನಾಗರಿಕರು ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ಕರೆ ನೀಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa