ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವೃತ್ತಿಪರ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in ದಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಮಾರ್ಗಸೂಚಿಗಳನ್ವಯ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಟ 35 ವರ್ಷ ನಿಗದಿಪಡಿಸಲಾಗಿದೆ (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 8088894549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ: 9986244408, ಕುಷ್ಟಗಿ: 8880482486, ಯಲಬುರ್ಗಾ: 8095191406 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್