ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಾರಟಗಿ ತಾಲ್ಲೂಕಿನ ನಾಗನಕಲ್ ಗ್ರಾಮದ ಯಂಕೋಬ ರಂಗಪ್ಪ ಕೆಂಚನಗುಡ್ಡ (32) ಕಾಣೆಯಾಗಿದ್ದು, ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 28/2023 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.5 ಅಡಿ ಎತ್ತರವಿದ್ದು, ದುಂಡು ಮುಖ, ಕೆಂಪು ಮೈಬಣ್ಣ, ಸದೃಢ ಮೈಕಟ್ಟು, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಹೊಂದಿದ್ದಾರೆ. ಮನೆಯಿಂದ ಕಾಣೆಯಾದಾಗ ಹಳದಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಪೊಲೀಸ್ ಕಂಟ್ರೋಲ್ ರೂಂ: 08539-230111, ಜಿಲ್ಲಾ ಪೊಲೀಸ್ ಅಧೀಕ್ಷಕರು: 08539-230222, ಗಂಗಾವತಿ ಡಿವೈಎಸ್‍ಪಿ: 08533-230853, ಕಾರಟಗಿ ಪೊಲೀಸ್ ಠಾಣೆ: 08533-275331, 9480803754, ಇ-ಮೇಲ್ ವಿಳಾಸ: karatagikpl@ksp.gov.in ಗೆ ಸಂಪರ್ಕಿಸಿ ಮಾಹಿತಿ ನಿಡುವಂತೆ ಕಾರಟಗಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್