ಕರಾಟೆ ತರಬೇತಿ : ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ
ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿಯನ್ನು ನೀಡಲು ಅ
ಕರಾಟೆ ತರಬೇತಿ : ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ


ಕೊಪ್ಪಳ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಕರಾಟೆ ಸ್ವಯಂ ರಕ್ಷಣಾ ತರಬೇತಿಯನ್ನು ನೀಡಲು ಅರ್ಹ ನುರಿತ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಲ್ಲಿ 6,7,8,9 ಮತ್ತು 11ನೇ ತರಗತಿಯವರೆಗಿನ ವಿದ್ಯಾರ್ಥಿನಿಯರಿಗೆ 06 ತಿಂಗಳಿಗೆ 48 ಬೋಧನಾ ಅವಧಿಗಳಲ್ಲಿ ಕರಾಟೆ-ಸ್ವಯಂ ರಕ್ಷಣಾ ತರಬೇತಿಯನ್ನು ನೀಡಲು ಅರ್ಹ ನುರಿತ ಮಹಿಳಾ ತರಬೇತಿದಾರರು ಅರ್ಜಿ ಸಲ್ಲಿಸಬಹುದು.

ಆಸ್ತಕ ತರಬೇತಿದಾರರು ಸೆಪ್ಟೆಂಬರ್ 26 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಜಾದ್ ಭವನ, ಹೊಸಪೇಟ ರಸ್ತೆ, ಕೊಪ್ಪಳ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-225070 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande