ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಶಾಸಕ ಮೇಟಿ ಚಾಲನೆ
ವಿಜಯಪುರ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಸೆಪ್ಟೆಂಬರ 22 ರಿಂದ ಅಕ್ಟೋಬರ 7 ವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಾಗಲಕೋಟೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಸೋಮವಾರ ಚಾಲನೆ ನೀಡಿದ
ಸಮೀಕ್ಷೆ


ವಿಜಯಪುರ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಾದ್ಯಂತ ಸೆಪ್ಟೆಂಬರ 22 ರಿಂದ ಅಕ್ಟೋಬರ 7 ವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಾಗಲಕೋಟೆ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಸೋಮವಾರ ಚಾಲನೆ ನೀಡಿದರು.

ಗಣತಿದಾರರಿಗೆ ಸಮೀಕ್ಷಾ ಕಿಟ್‍ಗಳನ್ನು ವಿತರಿಸಿ, ನಂತರ ನವನಗರದ ಸೆಕ್ಟರ ನಂಬರ 20ರ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ರಾಜ್ಯದ ಅಭಿವೃದ್ದಿ ಮತ್ತು ಸಾಮಾಜದ ಎಲ್ಲ ವರ್ಗಗಳಿಗೆ ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಒಟ್ಟು 60 ಪ್ರಶ್ನೆಗಳನ್ನೊಂಗೊಂಡಿದ್ದು, ಗಣತಿದಾರರಿಗೆ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಬಾಗಲಕೋಟೆ ತಹಶೀಲ್ದಾರ ವಾಸುದೇವ ಸ್ವಾಮಿ, ಗ್ರೇಡ್-2 ತಹಶೀಲ್ದಾರ ಬಿರಾದಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ಅಧಿಕಾರಿ ಸುರೇಶ ಪತ್ತಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ, ಗಣತಿದಾರರಾದ ಎಂ.ಆರ್.ಸುತಾರ, ರಾಘವೇಂದ್ರ ಕುರಿ, ಐ.ಡಿ.ಅತ್ತಾರ, ಎ.ಎಂ.ಮೋಮಿನ್, ಮನಿಯಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಾಗಲಕೋಟೆ ತಾಲೂಕಾ ವ್ಯಾಪ್ತಿಯಲ್ಲಿ 86670 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆ ಕಾರ್ಯಕ್ಕಾಗಿ 771 ಸಮೀಕ್ಷಾ ಬ್ಲಾಕ್‍ಗಳನ್ನು ಗುರುತಿಸಿ, ಪ್ರತಿ ಬ್ಲಾಕ್‍ಗೆ ಒಬ್ಬರಂತೆ ಸಮೀಕ್ಷಾದಾರರನ್ನು ನೇಮಿಸಲಾಗಿದೆ. ಸಮೀಕ್ಷಾ ಕಾರ್ಯವು ಸಂಪೂರ್ಣವಾಗಿ ಮೊಬೈಲ್ ಸರ್ವೆ ಆ್ಯಪ್ ಮುಖಾಂತರ ನಡೆಯಲಿದೆ. ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಗೊಂದಲವಿದ್ದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004ಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande