ವಿಜಯಪುರ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿರೋಧಿಸಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೆಪ್ಟೆಂಬರ್ 18ರಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನನ್ನ ವಿರೋಧ ಇದೆ. ನಾನು ಈ ವಿಚಾರವಾಗಿ ಸಿಎಂ ಗಮನಕ್ಕೆ ತರುತ್ತೇನೆ. ಹಿಂದೆ ಕೂಡಾ ಈ ವಿಚಾರವಾಗಿ ಸಿಎಂ ಅವರೊಟ್ಟಿಗೆ ಚರ್ಚೆ ಮಾಡಿರುವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಶರಣ ಪ್ರಕಾಶ ಪಾಟೀಲ ಹಾಗೂ ದಿನೇಶ ಗುಂಡುರಾವ ಅವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande