ಗದಗ, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಗದಗ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ವಿಟಿಪಿಸಿ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸಹಯೋಗದಲ್ಲಿ ಎಂಎಸ್‌ಎಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೂಳಿಸುವುದು (ಆರ್‌ಎಎಮ್‌ಪಿ) ಯೋಜನೆಯಡಿಯಲ್ಲಿ ಸೆಪ್ಟಂಬರ್ 23 ರಂದು ಬೆಳಗ್ಗೆ 10 : 30 ಘಂಟೆಗೆ ನಗರದ ಎಪಿಎಂಸಿ ರಸ್ತೆಯಲ್ಲಿನ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದ ವಾಣಿಜ್ಯೋದ್ಯಮ ಭವನದಲ್ಲಿ ಝಡ್‌ಇಡಿ ಲೀನ್ ಯೋಜನೆ ಹಾಗೂ ರಪ್ತು ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯುವುದು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿ ಎನ್ ಶ್ರೀಧರ ಉದ್ಘಾಟಿಸುವರು.ಗೌರವಾನ್ವಿತ ಅತಿಥಿಗಳಾಗಿ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ತಾತನಗೌಡ ಎಸ್ ಪಾಟೀಲ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಎಸ್.ಮಲ್ಲಿಕಾರ್ಜುನ ಅವರುಗಳು ಆಗಮಿಸುವರು. ಕಾಸಿಯಾದ ಅಧ್ಯಕ್ಷರಾದ ಗಣೇಶರಾವ್‌ಬಿ ಆರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕೈಗಾರಿಕೋದ್ಯಮಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / lalita MP