ಅರುಣಾಚಲ ಪ್ರದೇಶ ಮತ್ತು ತ್ರಿಪುರಾಕ್ಕೆ ಪ್ರಧಾನಿ ಮೋದಿ
ನವದೆಹಲಿ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಇಟಾನಗರದಲ್ಲಿ ಅವರು ₹3,700 ಕೋಟಿಗೂ ಹೆಚ್ಚು ವೆಚ್ಚದ ಹಿಯೋ (240 ಮೆಗಾವ್ಯಾಟ್) ಮತ್ತು ಟಾಟೊ–ಐ (186 ಮೆಗಾವ್ಯಾಟ್) ಜಲವಿದ್ಯುತ್ ಯೋಜನೆಗಳಿಗೆ ಶಂಕುಸ್
Pm


ನವದೆಹಲಿ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಇಟಾನಗರದಲ್ಲಿ ಅವರು ₹3,700 ಕೋಟಿಗೂ ಹೆಚ್ಚು ವೆಚ್ಚದ ಹಿಯೋ (240 ಮೆಗಾವ್ಯಾಟ್) ಮತ್ತು ಟಾಟೊ–ಐ (186 ಮೆಗಾವ್ಯಾಟ್) ಜಲವಿದ್ಯುತ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ತವಾಂಗ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನಗಳಿಗೆ ಅನುಗುಣವಾಗಿರುವ ಅತ್ಯಾಧುನಿಕ ಸಮಾವೇಶ ಕೇಂದ್ರಕ್ಕೂ ಅಡಿಪಾಯ ಹಾಕಲಿದ್ದಾರೆ. ₹1,290 ಕೋಟಿಗೂ ಹೆಚ್ಚು ಮೌಲ್ಯದ ಸಂಪರ್ಕ, ಆರೋಗ್ಯ ಮತ್ತು ಮಹಿಳಾ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳಿಗೂ ಚಾಲನೆ ನೀಡಲಿದ್ದಾರೆ.

ತ್ರಿಪುರಾದ ಗೋಮತಿ ಜಿಲ್ಲೆಯ ಉದಯಪುರ ಪಟ್ಟಣದಲ್ಲಿರುವ ಪ್ರಸಿದ್ಧ ಮಾತಾ ತ್ರಿಪುರ ಸುಂದರಿ ದೇವಾಲಯ ಸಂಕೀರ್ಣದ ಅಭಿವೃದ್ಧಿ ಕಾರ್ಯಗಳನ್ನು ಅವರು ಉದ್ಘಾಟಿಸಲಿದ್ದಾರೆ.

ಪ್ರಸಾದ್ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿಗಳು ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡಲಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande