ಪಂಜಾಬ್ ಪ್ರವಾಹ ಪೀಡಿತರಿಗೆ ಸಮಗ್ರ ಪರಿಹಾರ ಪ್ಯಾಕೇಜ್ : ರಾಹುಲ್ ಗಾಂಧಿ ಒತ್ತಾಯ
ನವದೆಹಲಿ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಂಜಾಬ್‌ನಲ್ಲಿ ಪ್ರವಾಹದಿಂದ ಹಾನಿಗೊಂಡವರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ₹1,600 ಕೋಟಿ ಪರಿಹಾರ ಪ್ಯಾಕೇಜ್ ಸಾಕಾಗುವುದಿಲ್ಲ ಎಂದು ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ರಾಜ್ಯಕ್ಕೆ ಸಮಗ್ರ ಪುನರ್ವಸತಿ ಪ್ಯಾಕೇಜ್ ಘೋಷಿಸುವ
ಪಂಜಾಬ್ ಪ್ರವಾಹ ಪೀಡಿತರಿಗೆ ಸಮಗ್ರ ಪರಿಹಾರ ಪ್ಯಾಕೇಜ್ : ರಾಹುಲ್ ಗಾಂಧಿ ಒತ್ತಾಯ


ನವದೆಹಲಿ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪಂಜಾಬ್‌ನಲ್ಲಿ ಪ್ರವಾಹದಿಂದ ಹಾನಿಗೊಂಡವರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ₹1,600 ಕೋಟಿ ಪರಿಹಾರ ಪ್ಯಾಕೇಜ್ ಸಾಕಾಗುವುದಿಲ್ಲ ಎಂದು ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ರಾಜ್ಯಕ್ಕೆ ಸಮಗ್ರ ಪುನರ್ವಸತಿ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ರಾಹುಲ್ ಗಾಂಧಿ ಎಕ್ಸನಲ್ಲಿ 10 ನಿಮಿಷ 52 ಸೆಕೆಂಡುಗಳ ಸಾಕ್ಷ್ಯಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ ಅವರು ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳನ್ನು ಭೇಟಿ ಮಾಡಿ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ಪಂಜಾಬ್ ಪ್ರವಾಹದಿಂದ ₹20,000 ಕೋಟಿ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರ ಕೇವಲ ₹1,600 ಕೋಟಿ ಪರಿಹಾರ ಘೋಷಿಸಿದೆ. ಪ್ರವಾಹದಿಂದ ಲಕ್ಷಾಂತರ ಮನೆಗಳು ನಾಶವಾಗಿದ್ದು, 400,000 ಎಕರೆಗಳಷ್ಟು ಬೆಳೆ ಹಾನಿಗೊಂಡಿದೆ ಮತ್ತು ಹಲವಾರು ಜಾನುವಾರುಗಳು ಮೃತಪಟ್ಟಿವೆ‌ ಎಂದು ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಜನರಿಗೆ ತಕ್ಷಣ ಸಮಗ್ರ ಪುನರ್ವಸತಿ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande