ನಾಳೆ ಸಿಂಧನೂರ ತಾಲೂಕು ಗ್ರಾಮೀಣ ದಸರಾ ಉತ್ಸವ : ಸಚಿವರಿಂದ ಚಾಲನೆ
ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಿಂಧನೂರು ತಾಲೂಕಾಡಳಿತ, ತಾಲೂಕ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರ ತಾಲೂಕಿನ ಸೋಮಲಾಪುರದ ಶ್ರೀ ಕ್ಷೇತ್ರ ಸಿದ್ಧಪರ್ವತ ಅಂಬಾಮಠದಲ್ಲಿ ಸೆ.23ರ ಬೆಳಿಗ್ಗೆ 10
ನಾಳೆ ಸಿಂಧನೂರ ತಾಲೂಕು ಗ್ರಾಮೀಣ ದಸರಾ ಉತ್ಸವ : ಸಚಿವರಿಂದ ಚಾಲನೆ


ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಿಂಧನೂರು ತಾಲೂಕಾಡಳಿತ, ತಾಲೂಕ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರ ತಾಲೂಕಿನ ಸೋಮಲಾಪುರದ ಶ್ರೀ ಕ್ಷೇತ್ರ ಸಿದ್ಧಪರ್ವತ ಅಂಬಾಮಠದಲ್ಲಿ ಸೆ.23ರ ಬೆಳಿಗ್ಗೆ 10 ಗಂಟೆಗೆ ನಮ್ಮ ಸಿಂಧನೂರು ಗ್ರಾಮೀಣ ದಸರಾ ಮತ್ತು ಅಂಬಾದೇವಿ ನವರಾತ್ರಿ ದಸರಾ ಉತ್ಸವ ಉದ್ಘಾಟನೆ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಿಂದ ಪೂರ್ಣ ಕುಂಭ-ಕಳಸ ಮತ್ತು ಆಕರ್ಷಕ ಕಲಾ ತಂಡಗಳೊಂದಿಗೆ ಸೋಮಲಾಪುರದ ಕೆ.ಪಿ.ಎಸ್.ಶಾಲೆ ಹತ್ತಿರದ ಕಟ್ಟೆ ಬಸವಣ್ಣ ದೇವಸ್ಥಾನದಿಂದ ಅಂಬಾದೇವಿ ದೇವಸ್ಥಾನದವರೆಗೆ ಮೆರವಣಿಗೆ ಹಾಗೂ ಹಸಿರು ದಸರಾ ಕಾರ್ಯಕ್ರಮದಡಿಯಲ್ಲಿ ಕ್ಲಸ್ಟರ್ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸುವರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಐ.ಟಿ. ಮತ್ತು ಬಿ.ಟಿ. ಇಲಾಖೆಯ ಸಚಿವರಾದ

ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಸಣ್ಣ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಘನ ಉಪಸ್ಥಿತಿ ವಹಿಸುವರು.

ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ವಿಧಾನ ಪರಿಷತ್ ಶಾಸಕರು ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಬಸನಗೌಡ ಬಾದರ್ಲಿ, ಮಾಜಿ ಸಂಸದರು ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವರು ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ವೆಂಕಟರಾವ್ ನಾಡಗೌಡ, ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ವೆಂಕನಗೌಡ (ಬಾಬುಗೌಡ) ಬಾದರ್ಲಿ, ಸೋಮಲಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರೇಣುಕಮ್ಮ ಗಂ. ಹುಸೇನಪ್ಪ ಮಲ್ಕಾಪುರ, ಅಂಬಾಮಠ ಕಮಿಟಿಯ ಅಧ್ಯಕ್ಷರಾದ ರಂಗನಗೌಡ ಗೊರೇಬಾಳ ಅವರು ಭಾಗಿಯಾಗಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಪುಟ್ಟಮಾದಯ್ಯ ಎಂ, ಅಪರ ಜಿಲ್ಲಾಧಿಕಾರಿ ಶಿವಾನಂದ ವೈ.ಭಜಂತ್ರಿ ಅವರು ಭಾಗಿಯಾಗಲಿದ್ದಾರೆ.

ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು: ಸರಿಗಮಪ ಖ್ಯಾತಿಯ ಜ್ಞಾನೇಶ, ಶಿವಾನಿ, ಭೂಮಿಕಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ, ಅರುಣೋದಯ ಸಾಂಸ್ಕೃತಿಕ ಕಲಾ ತಂಡ ಕೊತಬಾಳ ಇವರಿಂದ ಜೋಗತಿ ನೃತ್ಯ, ರಂಗಧಾರ ರೇಪರ್ಟರಿ (ರಿ) ಕೊಪ್ಪಳ ತಂಡದಿಂದ ಶಿಕ್ಷಣ, ಆರೋಗ್ಯ, ಕೃಷಿಗೆ ಸಂಬಂಧಿಸಿದಂತೆ ಜಾಗೃತಿ ರೂಪಕ ನಾಟಕಗಳು, ಗ್ರಾಮೀಣ ಕಲಾ ತಂಡಗಳಿಂದ ಕಲೆ-ಸಂಸ್ಕೃತಿ-ಜನಪದ ಕಾರ್ಯಕ್ರಮಗಳು ಹಾಗೂ ಕಾಲೇಜು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದೇವಿ ಮೂರ್ತಿ ಪ್ರತಿμÁ್ಠಪನೆ: ಸೆಪ್ಟೆಂಬರ್ 23ರ ಸಂಜೆ 5 ಗಂಟೆಗೆ ಸಿಂಧನೂರಿನ ದಸರಾ ಉತ್ಸವ ವೇದಿಕೆಯ ಹತ್ತಿರ ಶ್ರೀ ದೇವಿ ಮೂರ್ತಿಯನ್ನು ವೇ.ಮೂ. ಅಮರಯ್ಯಸ್ವಾಮಿ ಹಿರೇಮಠ, ಅಲಬನೂರು ಇವರಿಂದ

ಪ್ರತಿμÁ್ಠಪನೆ ಮಾಡಲಾಗುತ್ತದೆ ಎಂದು ಸಿಂಧನೂರು ದಸರಾ ಉತ್ಸವ ಸಮಿತಿಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande