ಮೈಸೂರು, 22 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಮೈಸೂರಿನಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂ ಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.
ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa