ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರ ಗಮನಕ್ಕೆ
ಗದಗ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ನಗರಸಭೆ ಬೀದಿ ಬದಿ ವ್ಯಾಪಾರಸ್ಥರಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿಯನ್ನು ರಚಿಸಲು ಅವಶ್ಯ ಇರುವುದರಿಂದ ಸದರಿ ಸಮಿತಿ ರಚನೆಗಾಗಿ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಪದವಿ ಪೂರ್ವ ಕಾಲೇಜಿನಲ್ಲಿ ಆಯ್ಕೆ ಪ್ರ
ಪೋಟೋ


ಗದಗ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ಬೆಟಗೇರಿ ನಗರಸಭೆ ಬೀದಿ ಬದಿ ವ್ಯಾಪಾರಸ್ಥರಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿಯನ್ನು ರಚಿಸಲು ಅವಶ್ಯ ಇರುವುದರಿಂದ ಸದರಿ ಸಮಿತಿ ರಚನೆಗಾಗಿ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಪದವಿ ಪೂರ್ವ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯ ಕೈಗೊಳ್ಳಲಾಗಿದೆ.

ಅದರಂತೆ ಈ ಸಮಿತಿ ರಚನೆ ಕಾರ್ಯದಲ್ಲಿ ಅರ್ಹ ಇರುವ ಗದಗ -ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ಬದಿ ವ್ಯಾಪಾರಸ್ಥರು ಆಧಾರ ಕಾರ್ಡ ಮತ್ತು ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿಯೊಂದಿಗೆ ಹಾಜರಾಗಿ ಸಮಿತಿ ರಚಿಸಲು ಸಹಕರಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡೇ ನಲ್ಮ ವಿಭಾಗ ನಗರಸಭೆ ಗದಗ ಬೆಟಗೇರಿ ಕಾರ್ಯಾಲಯದಲ್ಲಿ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande