ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗಗಳ ಪ್ರವೇಶ
ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿಯ ಅವಧಿಯನ್ನು ವಿಸ್ತರಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 27 ರವರೆಗೆ ಅರ್ಜಿ ಸಲ್ಲಿಸಿ, ಸೆ. 29 ರಂದು ಪ್ರವೇಶಾತಿಯನ್ನು ಪಡೆಯ
ಕೊಪ್ಪಳ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗಗಳ ಪ್ರವೇಶ


ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿಯ ಅವಧಿಯನ್ನು ವಿಸ್ತರಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 27 ರವರೆಗೆ ಅರ್ಜಿ ಸಲ್ಲಿಸಿ, ಸೆ. 29 ರಂದು ಪ್ರವೇಶಾತಿಯನ್ನು ಪಡೆಯಬಹುದು.

ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿನ 2025-26ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ, ಸಮಾಜಶಾಸ್ತ್ರ, ಪ್ರದರ್ಶನ ಕಲೆ, ಮಹಿಳಾ ಅಧ್ಯಯನ ವಿಭಾಗ, ಪತ್ರಿಕೋದ್ಯಮ, ಎಂ.ಕಾA., ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ ಮತ್ತು ಗಣಿತಶಾಸ್ತ ಕೋರ್ಸುಗಳಿಗೆ UUCMS https://uucms.karnataka.gov.in/ ತಂತ್ರಾ0ಶದ ಮುಖಾಂತರ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬAಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣ https://www.koppaluniversity.ac.in ಗೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳದ ಪ್ರಭಾರ ಕುಲಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande