ರಾಯಚೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 2025-26ನೇ ಸಾಲಿಗೆ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ- ಸಹಾಯಧನ ಮಂಜೂರಿ ಮಾಡಲಾಗುತ್ತದೆ. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ಇತರೆ ಯಾವುದೇ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಬಹುದಾಗಿದೆ. ವಾರ್ಷಿಕವಾಗಿ ಶೇ.4 ದರದಲ್ಲಿ ಕನಿಷ್ಠ 1.00 ಲಕ್ಷ ರೂ. ಹಾಗೂ ಗರಿಷ್ಠ 2.00 ಲಕ್ಷಗಳ ರೂ. ಆರ್ಥಿಕ ನೆರವು ಮಂಜೂರು ಮಾಡಲಾಗುವುದು.
ಅರ್ಹತೆ: ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು ( 8 ಲಕ್ಷ ಆದಾಯ ಮಿತಿ), ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿ0ದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಮೀಸಲಾತಿ ನೀಡಲಾಗುವುದು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆಯೊ0ದಿಗೆ ವೆಬ್‌ಸೈಟ್: : www.ksbdb.karnataka.gov.in ನಲ್ಲಿ ಅಕ್ಟೋಬರ್ 31ರ ಸಂಜೆ 5ಗಂಟೆವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8762249230ಗೆ ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಜಿ.ಯು. ಹುಡೇದ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್