ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.
ಸಮೀಕ್ಷೆಯನ್ನು ಪ್ರಶ್ನಿಸಿ ಬ್ರಾಹ್ಮಣ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ, ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಜೋಶಿ ಅವರಿದ್ದ ನ್ಯಾಯಪೀಠ ವಿಚಾಣೆಯನ್ನು ಮುಂದೂಡಿತು.
ಅರ್ಜಿಗೆ ಸಂಬಂಧಿಸಿದಂತೆ, ಅರ್ಜಿದಾರರು ಮತ್ತು ಸರ್ಕಾರದ ಪರವಾಗಿ ಸುಮಾರು ಎರಡು ತಾಸು ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ನಾಳೆಗೆ ನಿಗದಿ ಪಡಿಸಿ ಆದೇಶಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa