ಕೋಲ್ಕತ್ತಾದಲ್ಲಿ ಮಳೆ ; ವಿದ್ಯುತ್ ಸ್ಪರ್ಶಿಸಿ ಐದು ಮಂದಿ ಸಾವು
ಕೋಲ್ಕತ್ತಾ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಪರ್ಶಿಸಿ ಐದು ಮಂದಿ ಸಾವನ್ನಪ್ಪಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ರಸ್ತೆ ಭಾಗಗಳು ಜಲಾವೃತಗೊಂಡು ರೈಲು ಮ
Death


ಕೋಲ್ಕತ್ತಾ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಪರ್ಶಿಸಿ ಐದು ಮಂದಿ ಸಾವನ್ನಪ್ಪಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ರಸ್ತೆ ಭಾಗಗಳು ಜಲಾವೃತಗೊಂಡು ರೈಲು ಮತ್ತು ಮೆಟ್ರೋ ಸಂಚಾರಕ್ಕೂ ತೊಂದರೆ ಉಂಟಾಗಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ತ್ವರಿತ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಿಇಎಸ್‌ಸಿ ಜನರಿಗೆ ಪ್ರವಾಹದಿಂದ ಸಿಲುಕಿರುವ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು, ಪಿಲ್ಲರ್ ಬಾಕ್ಸ್‌ಗಳು ಮತ್ತು ತಂತಿಗಳಿಂದ ದೂರವಿರಲು ಮನವಿ ಮಾಡಿದ್ದು, ತುರ್ತು ಸಹಾಯಕ್ಕಾಗಿ 033-3501-1912ನ್ನು ಸಂಪರ್ಕಿಸುವಂತೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande