ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರವು ಸಿನಿಮಾ ಟಿಕೆಟ್‌ಗಳಿಗೆ ಗರಿಷ್ಠ ₹200 ದರ ನಿಗದಿಪಡಿಸಿದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ನ್ಯಾ. ರವಿ ಹೊಸಮನಿ ಪೀಠ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಪಿವಿಆರ್, ಐನಾಕ್ಸ್ ಲಿಮಿಟೆಡ್, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್ ಅರ್ಜಿ ಹಾಕಿ, ಸರ್ಕಾರಿ ಆದೇಶ ಕಾನೂನುಬಾಹಿರವಾಗಿದ್ದು ಚಿತ್ರಮಂದಿರಗಳಲ್ಲಿ ಟಿಕೆಟ್‌ಗಳಿಗೆ ಗರಿಷ್ಠ ದರ ನಿಗದಿಪಡಿಸುವ ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಮನವಿ ಮಾಡಿದ್ದರು.
ಕಡಿಮೆ ಸೀಟುಗಳಿಗೆ ಹೆಚ್ಚಿನ ಸೌಲಭ್ಯ, ಕೋಟ್ಯಂತರ ರೂ. ಹೂಡಿಕೆ ಮತ್ತು ಚಿತ್ರ ನಿರ್ಮಾಣಕ್ಕೆ ಬೇಕಾದ ಶ್ರಮವನ್ನು ಪರಿಗಣಿಸದೇ ಸರ್ಕಾರ ನಿರ್ಧಾರ ಕೈಗೊಂಡಿದೆ. ಚಿತ್ರ ವೀಕ್ಷಣೆ ಕುರಿತು ನಿರ್ಧಾರ ಗ್ರಾಹಕನಿಗೆ ಬಿಟ್ಟ ಬಿಡಬೇಕೆಂದು ಸರ್ವೋಚ್ಚ ನ್ಯಾಯಾಲಯದ ತೀರ್ಪು ಉಲ್ಲೇಖಿಸಿ ವಾದ ಮಂಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa