ಕತ್ತೆಕಿರುಬ, ಪ್ರಾಣಿಯ ಪ್ರಾಣ ಉಳಿಸಲು ಹೋಗಿ ಅಪಘಾತ
ಗದಗ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಸೊರಟೂರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕತ್ತೆಕಿರುಬ ರಸ್ತೆ ದಾಟುವಾಗ ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಪಲ್ಟಿಯಾಗಿ ಕತ್ತೆಕಿರುಬ ಸ್ಥಳದಲ್ಲೇ ಮೃತಪಟ್ಟಿದೆ. ಜೀಪ್‌ನಲ್ಲಿ ಇದ್ದ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್
ಪೋಟೋ


ಗದಗ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಸೊರಟೂರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕತ್ತೆಕಿರುಬ ರಸ್ತೆ ದಾಟುವಾಗ ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಪಲ್ಟಿಯಾಗಿ ಕತ್ತೆಕಿರುಬ ಸ್ಥಳದಲ್ಲೇ ಮೃತಪಟ್ಟಿದೆ. ಜೀಪ್‌ನಲ್ಲಿ ಇದ್ದ ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೇಶ್ವರದಿಂದ ಗದಗ ಕಡೆಗೆ ಬರುತ್ತಿದ್ದ ಪೊಲೀಸ್ ಜೀಪ್ ಬೇಟಗೇರಿ ಠಾಣೆಯ ಎಎಸ್ಐ ಕಾಶಿಂಸಾಬ್, ವಾಯರ್‌ಲೆಸ್ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶಗೌಡ ಪಾಟೀಲ್ ಹಾಗೂ ಚಾಲಕ ಓಂನಾಥ್ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಎಎಸ್ಐ ಕಾಶಿಂಸಾಬ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಸುಚಿರಾಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ಸ್‌ಪೆಕ್ಟರ್ ಉಮೇಶಗೌಡ ಪಾಟೀಲ್ ಹಾಗೂ ಚಾಲಕ ಓಂನಾಥ್ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಘಟನೆ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande