ಕೊಪ್ಪಳ : ಯುವಜನೋತ್ಸವ
ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ತಾತ್ಕಾಲಿಕ ದಿನಾಂಕ ಅಕ್ಟೋಬರ್ 15 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗಿದ್ದು, 15 ರಿಂದ 29 ವರ್ಷ ವಯೋಮಾನದೊಳಗಿನ ಆಸಕ್ತ ಯುವಜನರು ಭಾಗವಹಿಸಬಹುದು. ಕೇಂದ್ರ ಸರ್ಕಾರದ ಯುವ ವ್ಯವಹಾ
ಕೊಪ್ಪಳ : ಯುವಜನೋತ್ಸವ


ಕೊಪ್ಪಳ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ತಾತ್ಕಾಲಿಕ ದಿನಾಂಕ ಅಕ್ಟೋಬರ್ 15 ರಂದು ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗಿದ್ದು, 15 ರಿಂದ 29 ವರ್ಷ ವಯೋಮಾನದೊಳಗಿನ ಆಸಕ್ತ ಯುವಜನರು ಭಾಗವಹಿಸಬಹುದು.

ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯವು ರಾಷ್ಟಮಟ್ಟದ ಯುವಜನೋತ್ಸವವನ್ನು ಪ್ರತಿ ವರ್ಷ ಜನವರಿ 12 ರಿಂದ 16ರ ವರೆಗೆ ಆಯೋಜಿಸುತ್ತದೆ.

ಕರ್ನಾಟಕ ವಿಜೇತ ಸ್ಪರ್ಧಾಳುಗಳ ತಂಡವನ್ನು ಕಳುಹಿಸುವ ಸಲುವಾಗಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಸಂಘಟಿಸಬೇಕಾಗಿದ್ದು, ಕೇಂದ್ರ ಸರ್ಕಾರದ ಅರೆ ಸರ್ಕಾರಿ ಪತ್ರದನ್ವಯ ಮತ್ತು Concept Note for NYF-2026 ರಲ್ಲಿನ ಮಾರ್ಗಸೂಚಿಗಳಂತೆ ಸ್ಫರ್ಧೆಗಳನ್ನು ಆಯೋಜಿಸಲಾಗುತ್ತದೆ.

ಸ್ಪರ್ಧೆಗಳು ಹಾಗೂ ಇತರೆ ಮಾಹಿತಿಗಾಗಿ ಬಿ. ಕೀರ್ತಿವರ್ಧನ ದ್ವಿ.ದ.ಸ-7676343554 ಹಾಗೂ ಕಛೇರಿಯ ದೂರವಾಣಿ ಸಂಖ್ಯೆ: 08539-230121 ಇವರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande