ಬಳ್ಳಾರಿ : ಸೆಪ್ಟೆಂಬರ್ 26ಕ್ಕೆ ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರ ಬೃಹತ್ ಪ್ರತಿಭಟನೆ
ಬಳ್ಳಾರಿ, 23 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗುತ್ತಿಗೆ-ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೆಪ್ಟಂಬರ್ 26ರ ಶುಕ್ರವಾರ ರಾಜ್ಯಾದ್ಯ
ಬಳ್ಳಾರಿ : ಸೆಪ್ಟೆಂಬರ್ 26ಕ್ಕೆ ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರ ಬೃಹತ್ ಪ್ರತಿಭಟನೆ


ಬಳ್ಳಾರಿ, 23 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗುತ್ತಿಗೆ-ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುವಿಕೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೆಪ್ಟಂಬರ್ 26ರ ಶುಕ್ರವಾರ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದುಎ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‍ನ ಜಿಲ್ಲಾ ಅಧ್ಯಕ್ಷ ಎ. ದೇವದಾಸ್ ಮತ್ತು ಜಿಲ್ಲಾ ಕಾರ್ಯದರ್ಶಿ ಡಾ. ಪ್ರಮೋದ್.ಎನ್ ಅವರು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದ್ದಾರೆ.

ಗುತ್ತಿಗೆ - ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ಸರ್ಕಾರ ಖಾಯಂ ಮಾಡಬೇಕು. ಆವರೆಗೂ ವಿವಿಧ ಇಲಾಖೆಗಳಿಂದಲೇ ನೇರವಾಗಿ ವೇತನ ಪಾವತಿಸಿ, ಸೇವಾಭದ್ರತೆ ಒದಗಿಸಬೇಕು. ಸರ್ಕಾರಿ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ವಿವಿದುದ್ದೇಶಕ್ಕಾಗಿ ಕಾರ್ಮಿಕರ ಸಹಕಾರ ಸಂಘ ರಚಿಸಲು ಕ್ರಮಕೈಗೊಳ್ಳಬೇಕು. ಕನಿಷ್ಠ ವೇತನ ಹೆಚ್ಚಳ ಕುರಿತ ರಾಜ್ಯ ಸರ್ಕಾರದ ಕರಡು ಅಧಿಸೂಚನೆ ಕೂಡಲೆ ಜಾರಿಯಾಗಬೇಕು ಎಂದರು.

ಬಳ್ಳಾರಿಯಲ್ಲಿ ಸುಸಜ್ಜಿತ ಇಎಸ್‍ಐ ಆಸ್ಪತ್ರೆ ಪ್ರಾರಂಭಿಸಬೇಕು. ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಇಎಸ್‍ಐ ಸೌಲಭ್ಯ ದೊರೆಯುವಂತೆ ಸಮರ್ಪಕ ಕ್ರಮಕೈಗೊಳ್ಳಬೇಕು. ಇಎಸ್‍ಐ ಪಡೆಯುವ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಬೇಕು. ಇಎಸ್‍ಐ ಹಾಗೂ ಪಿಎಫ್ ಸೌಲಭ್ಯದ ಮಿತಿಯನ್ನು ಇಂದಿನ ಬೆಲೆ ಏರಿಕೆ ಅನುಗುಣವಾಗಿ ಹೆಚ್ಚಿಸಬೇಕು. ಎಲ್ಲಾ ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ರೂ.36,000 ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ, ವಿಮ್ಸ್ ಗುತ್ತಿಗೆ ನೌಕರರ ಸಂಘ, ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಸರಬರಾಜು ಕಂಪೆನಿಗಳ ಗುತ್ತಿಗೆ ನೌಕರರ ಸಂಘ, ಸ್ಪಾಂಜ್ ಐರನ್ ಗುತ್ತಿಗೆ ಕಾರ್ಮಿಕರ ಸಂಘಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ ಎಂದರು.

ಎಐಯುಟಿಯುಸಿ ಉಪಾಧ್ಯಕ್ಷರಾದ ಆರ್. ಸೋಮಶೇಖರಗೌಡ, ಎ. ಶಾಂತಾ, ಜಂಟಿ ಕಾರ್ಯದರ್ಶಿ ಸುರೇಶ್, ಶರ್ಮಾಸ್ ಮುಖಂಡರಾದ ಮುರಳಿ, ಚೇತನ್, ಕಿರಣ್ ಕುಮಾರ್, ಪಾರ್ವತಮ್ಮ, ಪುಷ್ಪವತಿ ಇನ್ನಿತರರು ಉಪಸ್ಥಿತರಿದ್ದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಸಕ್ತರು : 9035939340, 7353501303.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande