ಮೈಸೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಉದ್ಘಾಟಿಸಿದರು.
ಈ ವೇಳೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್, ಮಹಿಳಾ ದಸರಾ ಸಮಿತಿ ಅಧ್ಯಕ್ಷರಾದ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಮಹಿಳಾ ದಸರಾ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಸವಿತಾ.ಬಿ.ಎಂ, ಮಹಿಳಾ ದಸರಾ ಸಮಿತಿಯ ಲತಾ ಮೋಹನ್, ಶಿಲ್ಪ ಶ್ರೀ, ಮಂಜುಳಾ ಮಂಜುನಾಥ್, ವರಲಕ್ಷ್ಮೀ, ಶಶಿ ರೇಖಾ, ಮಾಲೇಗೌಡ, ಲತಾ ಜಗದೀಶ್ ಸೇರಿದಂತೆ ಮಹಿಳಾ ದಸರಾ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa