ಬಳ್ಳಾರಿ, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿಗೆ ಜಪಾನ್ ವಿಶ್ವವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸೆಪ್ಟಂಬರ್ 25 ಮತ್ತು 26 ರಂದು ಎರಡು ದಿನಗಳ ಕಾಲ ಭೇಟಿ ನೀಡಿ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಲಿದ್ದಾರೆ ಎಂದು ಸರಳಾದೇವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಹ್ಲಾದ್ ಚೌದ್ರಿ .ಜಿ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಕರ್ತರಿಗೆ ಮಾಹಿತಿ ನೀಡಿರುವ ಅವರು, ಜಪಾನ್‍ನ ನಾಗಸಾಕಿ ವಿಶ್ವವಿದ್ಯಾಲಯದ ಪ್ರೊ.ಟೊಮೊಕಿ ನಕಯಾಮ, ಮತ್ತು ಆಂಧ್ರಪ್ರದೇಶ ರಾಜ್ಯದ ಅನಂತಪುರಂ ಜಿಲ್ಲೆಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೂರು ರಾಮಕೃಷ್ಣಾರೆಡ್ಡಿ ಅವರು ಸರಳಾದೇವಿ ಕಾಲೇಜಿಗೆ ಸೆಪ್ಟಂಬರ್ 25 ರಂದು ಭೇಟಿ ನೀಡಿ ವಿಜ್ಞಾನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟಂಬರ್ 26ರಂದು ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಕಾರ್ಯಗಳಲ್ಲಿ ಸದರಿ ಸಂದರ್ಶಕ ಪ್ರಾಧ್ಯಾಪಕರು ಭಾಗವಹಿಸಿ ಸಂಶೋಧನೆಯ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್