ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa