ರಾಯಚೂರು, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದಸರಾ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ನಡೆಯುತ್ತಿರುವ ಶ್ರೀ ದೇವಿ ಪುರಾಣ ಪ್ರವಚನ ಹಾಗೂ ಮಂಗಲೋತ್ಸವ ಕಾರ್ಯಕ್ರಮ ನಿಮಿತ್ಯ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಭೇಟಿ ನೀಡಿ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲ ಸ್ವಾಮಿಗಳ ಆಶೀರ್ವಾದ ಪಡೆದರು.
ನಾಡಿನ ಸಮಸ್ತ ಜನತೆಗೆ ಶ್ರೀ ದೇವಿಯು ಒಳಿತನ್ನು ಮಾಡಲಿ ಎಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾನತೆ ತರುವಲ್ಲಿ ಮಠ-ಮಾನ್ಯಗಳ ಪಾತ್ರ ದೊಡ್ಡದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ಶ್ರೀಗಳು ರವಿ ಬೋಸರಾಜು ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಪಟೀಲ್ ಅತ್ತನೂರು,ಜಿ ಶಿವಮೂರ್ತಿ, ಹಿರಿಯರಾದ ಬಸವರಾಜ ಪಾಟೀಲ್ ದರೂರು, ಬಿ ರಮೇಶ, ನಿರ್ಮಲಾ ಬೆಣ್ಣಿ, ಪವನ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್