ರಾಜ್ಯದಲ್ಲಿ ರಸ್ತೆ ಗುಂಡಿ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಸೇರಿದಂತೆ ರಾಜ್ಯದ ರಸ್ತೆಗಳು ಗುಂಡಿಗಳಿಂದ ತುಂಬಿಹೊಗಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿದೆ. ಸಾರ್ವಜನಿಕ ತೊಂದರೆ ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ರ
Protest


ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಸೇರಿದಂತೆ ರಾಜ್ಯದ ರಸ್ತೆಗಳು ಗುಂಡಿಗಳಿಂದ ತುಂಬಿಹೊಗಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿದೆ. ಸಾರ್ವಜನಿಕ ತೊಂದರೆ ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬಿಜೆಪಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರದ ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್, ಮಹಾಲಕ್ಷ್ಮಿ ಲೇಔಟ್ ಹಾಗೂ ಕಂಠೀರವ ಸ್ಟುಡಿಯೋ ಪ್ರದೇಶಗಳಲ್ಲಿ ನಾಯಕರು ಮತ್ತು ಕಾರ್ಯಕರ್ತರು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಗುಂಡಿ ಮುಚ್ಚಿ ಜನರ ಪ್ರಾಣ ಉಳಿಸಿ, ಗುಂಡಿಗಳ ಊರು ಮಾಡಿದ ಕಾಂಗ್ರೆಸ್ ಸರ್ಕಾರ ಎಂದು ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande