ಬಳ್ಳಾರಿ : 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಸ್ತುತದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಸಮತೋಲಿತ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ
ಬಳ್ಳಾರಿ: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ


ಬಳ್ಳಾರಿ: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ


ಬಳ್ಳಾರಿ: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ


ಬಳ್ಳಾರಿ: 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ


ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರಸ್ತುತದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಸಮತೋಲಿತ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದಡಿ ನಗರದ ಜಿಪಂನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ 10 ನೇ ರಾಷ್ಟ್ರೀ ಯ ಆಯುರ್ವೇದ ದಿನಾಚರಣೆಯಲ್ಲಿ ಭಗವಾನ್ ಧನ್ವಂತರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದ ತತ್ವಗಳು, ಔಷಧೀಯ ಗಿಡಮೂಲಿಕೆಗಳು ಮತ್ತು ಜೀವನಶೈಲಿ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆಯುರ್ವೇದದ ಮಹತ್ವವನ್ನು ಜಾಗತಿಕವಾಗಿ ಪ್ರಚಾರ ಮಾಡುವುದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಆಚರಿಸಲು ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಆಯುರ್ವೇದ ವೈದ್ಯಕೀಯ ಪದ್ಧತಿಯು ಸಮತೋಲಿತ ಜೀವನಶೈಲಿ, ಗಿಡಮೂಲಿಕೆ ಚಿಕಿತ್ಸೆ ಮತ್ತು ಯೋಗದ ಮಹತ್ವವನ್ನು ಉತ್ತೇಜಿಸುತ್ತದೆ. ಜಿಲ್ಲಾ ಆಯುಷ್ ಇಲಾಖೆಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಆಧ್ಯಾತ್ಮಿಕತೆಯಿಂದ ಕೂಡಿದ ವೈದ್ಯ ಪದ್ಧತಿಯೇ ಆಯುರ್ವೇದ ಪದ್ಧತಿಯಾಗಿದ್ದು, ಇದು ನಮ್ಮ ಭಾರತೀಯ ಮೂಲದ ಪರಂಪರೆಯಾಗಿದೆ. ಆದರೆ ಪ್ರಸ್ತುತದಲ್ಲಿ ಪಾಶ್ಚಾತ್ಯ ವೈದ್ಯಕೀಯ ಪದ್ಧತಿಯ ಮೇಲೆ ಅವಲಂಬಿತವಾಗಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಆರೋಗ್ಯವೇ ಮಹಾಭಾಗ್ಯವಾಗಿದ್ದು, ಆರೋಗ್ಯದ ಮಹತ್ವ ಅರಿಯಬೇಕು. ಇಂದಿನ ದಿನಗಳಲ್ಲಿ ನಾವೆಲ್ಲರೂ ಸಮತೋಲಿತ ಆರೋಗ್ಯ ಪದ್ಧತಿ ಹೊಂದಬೇಕಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಆಯುರ್ವೇದ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಅಗತ್ಯವಿದೆ ಎಂದು ತಿಳಿಸಿದರು.

ಜಾಗತಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯುರ್ವೇದದ ಕೊಡುಗೆಯನ್ನು ನಾವೆಲ್ಲರೂ ಗುರುತಿಸಬೇಕಿದೆ. ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿರುವ ಆಯುರ್ವೇದದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಆಧುನಿಕ ವೈದ್ಯಕೀಯ ಪದ್ಧತಿಗೆ ತಕ್ಕಂತೆ ಆಯುಷ್(ಆಯುರ್ವೇದ) ವೈದ್ಯಕೀಯ ಪದ್ಧತಿಯು ಬೆಳೆಯಬೇಕು ಎಂದು ಆಶಿಸಿದ ಅವರು, ಇದಕ್ಕೆ ಬೇಕಾದ ಸಹಕಾರ-ಸೌಲಭ್ಯ ನೀಡಲು ಸರ್ಕಾರದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರೂಪಾಕ್ಷ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿರುವ 42 ಆಯುಷ್ ಚಿಕಿತ್ಸಾಲಯಗಳಲ್ಲಿ 20 ಆಯುಷ್ ವೈದ್ಯಾಧಿಕಾರಿಗಳ ಮೂಲಕ ಆಯುಷ್ ಚಿಕಿತ್ಸಾ ಸೇವೆ ಒದಗಿಸಲಾಗುತ್ತಿದೆ. 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಧನ್ವಂತರಿ ಶ್ಲೋಕ ಪಠಿಸಲಾಯಿತು. ಸಾಂಕೇತಿಕವಾಗಿ ಔಷಧಿ ಗಿಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಆಯುರ್ವೇದ ವೈದ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ.ಭಾರತಿ ಸಂಗಮ್, ಹಿರಿಯ ಆಯುಷ್ ವೈದ್ಯಾಧಿಕಾರಿ ಡಾ.ವಿಜಯೇಂದ್ರ ಆಚಾರ್ಯ, ವೈದ್ಯಾಧಿಕಾರಿ ಡಾ.ಫಣೇಂದ್ರ ಸೇರಿದಂತೆ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande