ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2006-07ನೇ ಸಾಲಿನಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲಿ 18 ವರ್ಷ ಪೂರ್ಣಗೊಂಡಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಯೋಜನೆಯ ಮೊತ್ತ ಪಡೆಯಲು ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 30ರೊಳಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande