ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa