ಸಿಂಧನೂರು, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಸಿಂಧನೂರು ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕಲಾ ದಸರಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ನಲ್ಲಿ ಸೆ.30ರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಕವಿಗಳಿಂದ ಸ್ವರಚಿತ ಕವನ ವಾಚನ ಹಾಗೂ ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಸಾಹಿತಿಗಳಾದ ಡಾ.ಸ್ವಾಮಿರಾವ್ ಕುಲಕರ್ಣಿ ಅವರು ಕವಿತಾ ವಾಚನಾ ಕಾರ್ಯಕ್ರಮ ಉದ್ಘಾಟಿಸುವರು.
ಸಾಂಸ್ಕೃತಿಕ ಕಾರ್ಯಕ್ರಮಗಳು: ಮಿಮಿಕ್ರಿ ಗೋಪಿ ಇವರಿಂದ ಹಾಸ್ಯ ಮಿಮಿಕ್ರಿ ಕಾರ್ಯಕ್ರಮ, ಮಜಾಭಾರತ ಮತ್ತು ಗಿಚ್ಚಿ ಗಿಲಿಗಿಲಿ ಖ್ಯಾತಿಯ ಕಲಾವಿದರಾದ ರಾಘವೇಂದ್ರ, ಹುಲಿ ಕಾರ್ತಿಕ್, ಚಿಲ್ಲರ್ ಮಂಜು, ಶಿವು ತಂಡದವರಿ0ದ ಹಾಸ್ಯ ನಾಟಕಗಳು ನಡೆಯಲಿವೆ ಎಂದು ಸಿಂಧನೂರು ದಸರಾ ಉತ್ಸವ ಸಮಿತಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್