ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಲ್ಲಿ ಅಕ್ಟೋಬರ ೭ ರಂದು ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು
ಡಿಸಿ


ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಲ್ಲಿ ಅಕ್ಟೋಬರ ೭ ರಂದು ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ ಜಿಲ್ಲಾಡಳಿತದಿಂದ ವಾಲ್ಮೀಕ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ತಂಡಗಳನ್ನು ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು. ಮೆರವಣಿಗೆ ಮಾರ್ಗವನ್ನು ಸ್ವಚ್ಚಗೊಳಿಸಲು ನಗರಸಭೆಗೆ ಸೂಚಿಸಿದರು. ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.

ವೇದಿಕೆ ಕಾರ್ಯಕ್ರಮ ನವನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವೇದಿಕೆ ಸಿದ್ದತೆ, ಅಲಂಕಾರ ಮಾಡಲು ಕ್ರಮವಹಿಸಲು ತಿಳಿಸಿದರು. ಶಿಷ್ಠಾಚಾರ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಕಾನೂನು ವ್ಯವಸ್ಥೆ ಕಾಪಾಡಲು ಪೊಲೀಸ್ ವ್ಯವಸ್ಥೆ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.

ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದು ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಕೃಷಿ ಜಂಟಿ ನಿರ್ದೇಶಕ ಲಕ್ಷö್ಮಣ ಕಳ್ಳೇನ್ನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ ಸೇರಿದಂತೆ ಸಮುದಾಯದ ಮುಖಂಡರಾದ ದ್ಯಾಮಣ್ಣ ಗಾಳಿ, ಆರ್.ಜಿ.ಸನ್ನಿ, ಲಕ್ಷö್ಮಣ ಮಾಳಗಿ, ಕೃಷ್ಣಾ ಪಾಟೀಲ, ನಿಂಗಪ್ಪ ಕ್ಯಾದಿಗ್ಗೇರಿ, ಶಂಭುಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande