ಗಾಂಧೀ, ಶಾಸ್ತ್ರಿ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ
ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತಿç ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ‌ ಹಾಗೂ ಅಚ್ಚುಕಟ್ಟಾಗಿ ಆಯೋಜನೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ಅಧಿಕಾರಿಗಳಿಗೆ ಸ
ಡಿಸಿ


ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತಿç ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ‌ ಹಾಗೂ ಅಚ್ಚುಕಟ್ಟಾಗಿ ಆಯೋಜನೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ ಸಂದೇಶದ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 30 ರಂದು ಬೆಳಗ್ಗೆ 6.30ಕ್ಕೆ ಸೈನಿಕ ಶಾಲೆಯ ಎದುರಿಗೆ ಇರುವ ಲಾಲ್ ಬಹದೂರ ಶಾಸ್ತ್ರಿ ಪುತ್ಥಳಿಯಿಂದ ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಸೈಕಲ್ ಜಾಥಾ ತಂಡವು ಇಂಡಿ ರಸ್ತೆ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಶ್ರಮದಾನ ಕೈಗೊಳ್ಳಲಾಗುವುದು.ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಸಂಘ ಸಂಸ್ಥೆಗಳು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.

ನಗರದ ಗಾಂಧಿ ಚೌಕದಲ್ಲಿರುವ ಗಾಂಧಿಜಿ ಅವರ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಪುತ್ಥಳಿಗೆ ಮಾಲಾರ್ಪಣೆ, ಅಕ್ಟೋಬರ್ 2ರಂದು ಬೆಳಗ್ಗೆ 9.30ಕ್ಕೆ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಈ ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ, ಸರ್ಮಧರ್ಮ ಪ್ರಾರ್ಥನೆ, ನಾಡಗೀತೆ, ಉಪನ್ಯಾಸ ಕಾರ್ಯಕ್ರಮ, ವಿವಿಧ ಶಾಲಾ ಮಕ್ಕಳಿಂದ ಛದ್ಮವೇಷ ಪ್ರದರ್ಶನ,ಗಾಂಧೀಜಿಯವರ ಪ್ರಿಯ ಹಾಡುಗಳ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.

ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ಇಲಾಖೆಯಿಂದ ವಿತರಿಸಲು ಕ್ರಮವಹಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಸಭೆಗೆ ಮಾಹಿತಿ ನೀಡಿದರು.

ಗಾಂಧೀ ಜಯಂತಿ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿರ್ಬಧಿಸಿ ಕ್ರಮವಹಿಸುವುದಾಗಿ ಹಾಗೂ ಸೂಕ್ತ ಸುರಕ್ಷತೆ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು, ಜಿಲ್ಲೆಯ ಎಲ್ಲಾ ಶಾಲಾ, ಕಚೇರಿಗಳಲ್ಲಿ ಆಚರಣೆ ಮಾಡುವಂತೆಯೂ ಸೂಚಿಸಲಾಯಿತು.

ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ,ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ,ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ,ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ, ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ವಿದ್ಯಾಧರ ನ್ಯಾಮಗೊಂಡ, ಸಮಾಜ ಕಲ್ಯಾಣ ಇಲಾಖೆಯ ಉಪ‌ನಿರ್ದೇಶಕರಾದ ಮಹೇಶ ಪೋತದಾರ,ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ,ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ನಿಲೇಶ್ ಬೆನಾಳ, ಪೀಟರ್ ಅಲೆಕ್ಸಾಂಡರ್, ಸುರೇಶ ಗೋಣಸಗಿ,ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ,ಸೋಮನಗೌಡ ಕಲ್ಲೂರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande