ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದ ಉಜನಿ ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಇದರಿಂದ ವಿಜಯಪುರ ಜಿಲ್ಲೆಯ ಭೀಮಾನದಿ ತಟದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಜಿಲ್ಲೆಯ ಚಡಚಣ, ಇಂಡಿ, ಆಲಮೇಲ ತಾಲೂಕಿನ ಭಾಗಗಳಲ್ಲಿ ಪ್ರವಾಹದ ಭೀತಿ ಸೃಷ್ಟಿ ಆಗಿದೆ. ಭೀಮಾನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತಗೊಂಡಿವೆ.
ಕರ್ನಾಟಕ ಮಹಾರಾಷ್ಟ ಸರ್ಕಾರ ಸಮಾನಾಂತರವಾಗಿ ನಿರ್ಮಾಣ ಮಾಡಿರುವ ಬ್ರಿಡ್ಜ್ ಕಂ ಬ್ಯಾರೇಜ್ ಗಳಾದ ಗೋವಿಂದಪುರ-ಭಂಡಾರಕವಟೆ, ಔಜ-ಶಿರನಾಳ, ಚಣೆಗಾಂವ-ಬರೂರ
ಹಿಂಗಣಿ-ಆಳಗಿ, ಖಾನಾಪುರ-ಪಡನೂರ, ಹಿಳ್ಳಿ-ಗುಬ್ಬೇವಾಡ ಬ್ಯಾರೇಜ್ ಗಳು ಜಲಾವೃತ ಆಗಿವೆ.
ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತಗೊಂಡಿದೆ. ಭೀಮಾ ನದಿ ಸುತ್ತಮುತ್ತಲ ಜಮೀನುಗಳಿಗೆ ನೀರು ಪಸರಿಸಿದೆ. ಬೆಳೆಗಳು ಹಾಳಾಗುವ ಭಯದಲ್ಲಿ ರೈತರು ಇದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande