ಕಲಬುರಗಿ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯ ಪರಿಣಾಮವಾಗಿ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕರ್ನಾಟಕದ ಕಲಬುರಗಿ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಪ್ರವಾಹ ಆತಂಕ ಉಂಟಾಗಿದೆ.
ಅಫಜಲಪುರ ಮತ್ತು ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದ್ದು, ಜಿಲ್ಲಾಡಳಿತ ತೀವ್ರ ಕಟ್ಟೆಚ್ಚರ ವಹಿಸಿದೆ. ನದಿ ತೀರಕ್ಕೆ ಯಾರೂ ತೆರಳದಂತೆ ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ.
ಮಂಗಳವಾರ ಉಜ್ಜನಿ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ಹಾಗೂ ಸೊನ್ನ ಬ್ಯಾರೇಜ್‌ನಿಂದ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇದರ ಪರಿಣಾಮವಾಗಿ ದೇವಲ ಗಾಣಗಾಪುರ, ಘತ್ತರಗಿ ಸೇತುವೆ ಹಾಗೂ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ನೀರಿನಲ್ಲಿ ಮುಳುಗಡೆಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa