ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದು ಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9343877670 ಅಥವಾ ಆಸ್ಪತ್ರೆಯ ಮೊಬೈಲ್ ಸಂಖ್ಯೆ -9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande