ಎಸ್.ಎಲ್.ಭೈರಪ್ಪ ನಿಧನಕ್ಕೆ ಎಚ್.ಕೆ.ಪಾಟೀಲ ಸಂತಾಪ
ಗದಗ, 24 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವರು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲರ ತೀವ್ರ ಸಂತಾಪಕ ಸೂಚಿಸಿದ್ದಾರೆ. ಕನ್ನಡ ಸಾರಸ್ವತ ಲೋಕದಲ್ಲಿ ಕಾದಂಬರಿಗಳ ಮೂಲಕ ಜನ ಮಾನಸದಲ್ಲಿ ನೆ
ಪೋಟೋ


ಗದಗ, 24 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ಸಚಿವರು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲರ ತೀವ್ರ ಸಂತಾಪಕ ಸೂಚಿಸಿದ್ದಾರೆ.

ಕನ್ನಡ ಸಾರಸ್ವತ ಲೋಕದಲ್ಲಿ ಕಾದಂಬರಿಗಳ ಮೂಲಕ ಜನ ಮಾನಸದಲ್ಲಿ ನೆಲೆ ಊರಿದ ಶ್ರೇಷ್ಠ ಸಾಹಿತಿ ಎಸ್ ಎಲ್ ಭೈರಪ್ಪ ಸಾಮಾಜಿಕ ಚಿಂತನೆ ಧರ್ಮದ ಪ್ರತಿಪಾದನೆ ಅವರ ಕಾದಂಬರಿಗಳಲ್ಲಿ ಕಾಣಬಹುದು ಈ ಕಾರಣಕ್ಕಾಗಿಯೇ ಅವರು ಜನಾನುರಾಗಿಯಾಗಿದ್ದರು ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ

ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರು ಕುಟುಂಬದ ಸದಸ್ಯರಿಗೆ ದೇವರು ನೀಡಲಿ, ಭೈರಪ್ಪನವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದವರು ಶೋಕ ವ್ಯಕ್ತಪಡಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande